Bible 2 India Mobile
[VER] : [KANNADA]     [PL]  [PB] 
 <<  Psalms 14 >> 

1ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, <<ದೇವರೇ ಇಲ್ಲ>> ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

3ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

4ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.

5ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.

6ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.

7ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.



 <<  Psalms 14 >> 


Bible2india.com
© 2010-2025
Help
Single Panel

Laporan Masalah/Saran