Bible 2 India Mobile
[VER] : [KANNADA]     [PL]  [PB] 
 <<  Psalms 17 >> 

1ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.

2ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.

3ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿಯೂ ತಪ್ಪಿಲ್ಲ.

4ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.

6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

7ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.

8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

9ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.

10ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.

11ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.

12ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.

13ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.

14ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

15ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.



 <<  Psalms 17 >> 


Bible2india.com
© 2010-2025
Help
Single Panel

Laporan Masalah/Saran