Bible 2 India Mobile
[VER] : [KANNADA]     [PL]  [PB] 
 <<  Psalms 20 >> 

1ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.

2ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.

3ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ

4ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

5ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.

6ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.

7ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.

8ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

9ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.



 <<  Psalms 20 >> 


Bible2india.com
© 2010-2025
Help
Single Panel

Laporan Masalah/Saran