Bible 2 India Mobile
[VER] : [KANNADA]     [PL]  [PB] 
 <<  Psalms 43 >> 

1ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

2ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?

3ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.

4ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.



 <<  Psalms 43 >> 


Bible2india.com
© 2010-2025
Help
Single Panel

Laporan Masalah/Saran