Bible 2 India Mobile
[VER] : [KANNADA]     [PL]  [PB] 
 <<  Psalms 8 >> 

1ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

2ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.

3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,

4ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

5ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.

7ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

8ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

9ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.



 <<  Psalms 8 >> 


Bible2india.com
© 2010-2025
Help
Single Panel

Laporan Masalah/Saran