Bible 2 India Mobile
[VER] : [KANNADA]     [PL]  [PB] 
 <<  Psalms 85 >> 

1ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

2ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ

3ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.

4ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.

5ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡಿ ಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?

6ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?

7ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.

8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.

9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.

10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.

11ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.

12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.

13ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.



 <<  Psalms 85 >> 


Bible2india.com
© 2010-2025
Help
Single Panel

Laporan Masalah/Saran