Bible 2 India Mobile
[VER] : [KANNADA]     [PL]  [PB] 
 <<  Psalms 123 >> 

1ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.

2ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

3ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;

4ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.


  Share Facebook  |  Share Twitter

 <<  Psalms 123 >> 


Bible2india.com
© 2010-2025
Help
Dual Panel

Laporan Masalah/Saran